ದುಗ್ಗಲಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. 19ರಂದು ದುಗ್ಗಲಡ್ಕದ ಶ್ರೀ ಅಯ್ಯಪ್ಪ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಧ್ವಜಾರೋಹಣ,ಗಣಪತಿ ಪ್ರತಿಷ್ಠೆ, ಗಣಪತಿ ಹವನ ಬಳಿಕ ಮಕ್ಕಳಿಗೆ ಅಕ್ಷರಾಭ್ಯಾಸ, ಶ್ರೀ ದುಗ್ಗಲಾಯ ಮಹಿಳಾ ಸೇವಾ ಸಮಿತಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 11:30 ರಿಂದ ದುಗ್ಗಲಡ್ಕ ಅಂಗನವಾಡಿ ಪುಟಾಣಿಗಳಿಂದ ಮತ್ತು ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಗೀತ ಕಲಾನಿಧಿ ಬಿರುದಾಂಕಿತ ಪದ್ಮನಾಭ ಬಿ.ಸಿ. ಚಾರ್ವಕ ಇವರ ನಿರೂಪಣೆ ಮತ್ತು ಗಾಯನ, ಅಭಿನವ ಡ್ಯಾನ್ಸ್ ಅಕಾಡೆಮಿ ಪೆರ್ನೆ ಮತ್ತು ನಕ್ಷತ್ರ ಕಲಾ ತಂಡ ಆಲಂಗಾರು ಇವರಿಂದ ನಾಟ್ಯ ಗಾನ ವೈಭವ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಇವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ. ಸಂಜೆ 6:00ಕ್ಕೆ ವೈಭವದ ಶೋಭಾಯಾತ್ರೆ ನಡೆದು ಕಂದಡ್ಕ ಹೊಳೆಯಲ್ಲಿ ಜಲ ಸ್ಥಂಭನಗೊಳ್ಳಲಿದೆ.ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಭಾಗವಹಿಸಬೇಕೆಂದು ಸಮಿತಿಯವರು ವಿನಂತಿಸಿದ್ದಾರೆ.