ಸುಳ್ಯದ ಶ್ರೀ ಶಾರದ ಮಹಿಳಾ ಪಿ.ಯು. ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

0

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಆಯುಕ್ತರ ಆದೇಶದಂತೆ ಸೆಪ್ಟಂಬರ್ 15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ .ಉಪಸ್ಥಿತರಿದ್ದು ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ಕಾರ್ಯಕ್ರಮವನ್ನು ನಿರ್ವಹಿಸಿದರು.