ಸುಬ್ರಹ್ಮಣ್ಯ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಮಾಲೋಚನಾ ಸಭೆ

0

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಹಾಗೂ ಅರಣ್ಯದ ಗಡಿಭಾಗಗಳಲ್ಲಿ ಹಲವು ದಶಕಗಳಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರಿಗೆ ಜಂಟಿ ಸರ್ವೇಯನ್ನು ಮಾಡಿಸಿ ಅಕ್ರಮ-ಸಕ್ರಮ ಹಾಗೂ 94ಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಲು ಸೆ.07 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಕಾನೂನಿಂದ ಮೂಲಭೂತ ಸೌಕರ್ಯಗಳಿಗೆ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡುತ್ತಾ ಮಾತನಾಡಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಸನ್ನ ದರ್ಬೆ “ಕಸ್ತೂರಿ ರಂಗನ್ ವರದಿ ಜಾರಿಯಾದರೆ ರಸ್ತೆ ಅಭಿವೃದ್ಧಿ ಹಾಗೂ ಸಾಮಾಜಿಕ ಅರಣ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ, ರಸ್ತೆ ಅಗಲೀಕರಣಕ್ಕೆ ಹಾಗೂ ಹೊಸ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ, ರೈತರ ನಿವೇಶನ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬಂದರೆ ಕನ್ವರ್ಷನ್ ಗೆ ಅನುಮತಿ ನೀಡುವುದಿಲ್ಲ, ಕೋವಿ ಪರವಾನಗಿ ಸಿಗುವುದಿಲ್ಲ ಹಾಗಾಗಿ ನಾವೆಲ್ಲರೂ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಅಚ್ಯುತ ಗೌಡ ಸುಬ್ರಹ್ಮಣ್ಯ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸದಸ್ಯರಾದ ಶೇಖರಪ್ಪ, ಹರೀಶ್ ಕಲ್ಲುಗುಂಡಿ, ತೀರ್ಥಕುಮಾರ್ ಕೋಲ್ಪೆ, ಕೋಕಿಲಾನಂದ.ಕೆ.ಎಸ್, ರಕ್ಷಿತ್ ಬಾರ್ಯ, ನಾರಾಯಣ ಗೌಡ ನಿರಾಯ, ಉಮೇಶ್.ಕೆ.ಎಸ್ ಕಮರ್ಕಜೆ, ಸಂತೋಷ್.ಎಂ, ಶೇಖರಪ್ಪ, ಶ್ರೀಕುಮಾರ್ ಬಿಲದ್ವಾರ, ಚಂದ್ರಹಾಸ ಶಿವಾಲ, ಅಚ್ಯುತ ಗೌಡ ಕುಕ್ಕಪ್ಪನಮನೆ ಉಪಸ್ಥಿತರಿದ್ದರು.