ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ವನ್ನಾಗಿ ಆಚರಿಸುವ ನಿಟ್ಟಿನಲ್ಲಿ ” ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮವು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸೆ.15ರಂದು ನಡೆಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಅವರು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷ ರವಿಚಂದ್ರ ಕಾಪಿಲ ಸದಸ್ಯರುಗಳಾದ ಶ್ರೀಧರ ಕುತ್ಯಾಳ, ದೇವಕಿ ಕುದ್ಕುಳಿ, ಪ್ರೇಮಲತಾ ಪಂಜಿಗುಂಡಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಗ್ರಾ ಪಂ ಸಿಬ್ಬಂದಿಗಳು, ಗ್ರಂಥಾಲಯ ಮೇಲ್ವಿಚಾರಕರು, ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.