ಸುಳ್ಯ ಎನ್ನೆoಪಿಯುಸಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

0


ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಅಂಗವಾಗಿ ಭಾರತದ ಪೀಠಿಕೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕಿ ಗೀತಾ ಎನ್ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ, ವಿ. ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ, ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.