ಮೇಲಾಟಗಳ ಪುನಶ್ಚೇತನ ಕಾರ್ಯಾಗಾರ ಮತ್ತು ತಾಲೂಕು ಮಟ್ಟದ ಕ್ರೀಡಾ ಕೂಟದ ಲಾಂಛನ ಬಿಡುಗಡೆ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಮತ್ತು ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸುಳ್ಯ ಘಟಕದ ವತಿಯಿಂದ ಮೇಲಾಟಗಳ ಪುನಶ್ಚೇತನ ಕಾರ್ಯಾಗಾರ ಮತ್ತು ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಕ್ರೀಡಾ ವಿಕ್ರಮ ಲಾಂಛನ ಬಿಡುಗಡೆ ಕಾರ್ಯಕ್ರಮ ಸೆ.15 ರಂದು ಸೈಂಟ್ ಬ್ರಿಜಿಡ್ಸ್ ಶಾಲೆ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸೈಂಟ್ ಜೋಸೆಫ್ ಶಾಲೆ ಸಂಚಾಲಕರಾದ ರೆ.ಪಾ.ವಿಕ್ಟರ್ ಡಿಸೋಜ ಉದ್ಘಾಟಿಸಿದರು. ತಾಲೂಕು ಮಟ್ಟದ ಕ್ರೀಡಾ ಕೂಟದ ಲಾಂಛನವನ್ನು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಇ ರಮೇಶ್ ಬಿಡುಗಡೆಗೊಳಿಸಿದರು. ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಧಿಕಾರಿ ಶ್ರೀಮತಿ ಶೀತಲ್,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಕ್ರೀಡಾಕೂಟಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಪೆರುವಾಜೆ ಡಾ.ಶಿವರಾಮ ಕಾರಂತ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರಾಮಚಂದ್ರ ಮಾಹಿತಿ ನೀಡಿದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಇಡ್ಯಡ್ಕ ಸಬಾಧ್ಯಕ್ಷತೆ ವಹಿಸಿದ್ದರು. ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆ ಸಂಚಾಲಕ ದೊಡ್ಡಣ್ಣ ಬರಮೇಲು,ಸೈಂಟ್ ಜೊಸೆಫ್ ವಿದ್ಯಾಸಂಸ್ಥೆಯ ಪಿಟಿಎ ಅಧ್ಯಕ್ಷರುಗಳಾದ ಗುರು ಬಿ.ಜಿ,ಜೆಕೆರೈ,ಸೈಂಟ್ ಬ್ರಿಜಿಡ್ಸ್ ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ನವೀನ್ ಮಚಾದೊ,ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಯೊಗೇಶ್ ಪಂಜ,ಸೈಂಟ್ ಬ್ರಿಜಿಡ್ಸ್ ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅಂತೋನಿ ಮೇರಿ,ಸೈಂಟ್ ಜೊಸೆಫ್ ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ,ಸೈಂಟ್ ಜೊಸೆಫ್ ವಿದ್ಯಾಸಂಸ್ಥೆ ಹಳೇ ವಿದ್ಯಾರ್ಥಿ ಸಂಘದ ನಿಹಾಲ್ ಕೊಡ್ತುಗುಳಿ,ಗ್ರೇಡ್ ಓನ್ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗಣೇಶ್ ಏನೆಕ್ಕಲ್ಲು,ಕ್ಷೇತ್ರ ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾಕುಮಾರಿ,ಶ್ರೀಮತಿ ನಳಿನಿ ಮೊದಲಾದವರು ಉಪಸ್ಥಿತರಿದ್ದರು.ಸೈಂಟ್ ಜೊಸೆಫ್ ವಿದ್ಯಾಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕಿ ವಂದಿಸಿ,ಕೆಪಿಎಸ್ ಬೆಳ್ಳಾರೆ ಶಿಕ್ಷಕಿ ಪುಷ್ಪಾವತಿ ಮತ್ತು ಸೈಂಟ್ ಬ್ರಿಜಿಡ್ಸ್ ಶಾಲೆ ಶಿಕ್ಷಕ ಉಮೇಶ್ ಪಂಜದಬೈಲು ಕಾರ್ಯಕ್ರಮ ನಿರೂಪಿಸಿದರು.