ಸುಳ್ಯ : 10 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ಚಾಲನೆ

0

ಸುಳ್ಯ ನಗರದ ಪ್ರಮುಖ ಬೀದಿಯಲ್ಲಿ ಸಾಗಿದ ಉತ್ಸವದ ಶೋಭಾಯಾತ್ರೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮೊಸರು ಕುಡಿಕೆ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ 10ನೇ ವರುಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ಚೆನ್ನಕೇಶವ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು.

ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ರವರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ವಿ.ಹೆಚ್.ಪಿ ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ, ಸಮಿತಿಯ ಉಪಾಧ್ಯಕ್ಷ ರಜತ್ ಅಡ್ಕಾರ್, ಪ್ರಕಾಶ್ ಯಾದವ್, ನಿಕಟ ಪೂರ್ವ ಅಧ್ಯಕ್ಷ ಹರೀಶ್ ರೈ ಉಬರಡ್ಕ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್,ಗಿರೀಶ್ ಕಲ್ಲುಗದ್ದೆ,ಸಂಘಟನೆಯ ಪ್ರಮುಖರಾದ ಸುಭೋದ್ ಶೆಟ್ಟಿ ಮೇನಾಲ, ಸುನಿಲ್ ಕೇರ್ಪಳ, ಮಹೇಶ್ ರೈ ಮೇನಾಲ, ಸುನಿಲ್ ರೈ ಮೇನಾಲ, ಚನಿಯ ಕಲ್ತಡ್ಕ, ಜಗದೀಶ್ ಸರಳಿಕುಂಜ,ರವಿಚಂದ್ರ ಕೊಡಿಯಾಲಬೈಲು, ವರ್ಷಿತ್ ಚೊಕ್ಕಾಡಿ,ಭಾನುಪ್ರಕಾಶ್ ಪೆಲತ್ತಡ್ಕ, ದೇವಿಪ್ರಸಾದ್ ಅತ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಉತ್ಸವದ ಶೋಭಾಯಾತ್ರೆ ಸುಳ್ಯ ನಗರದ ಪ್ರಮುಖ ಬೀದಿಯಲ್ಲಿ ಸಾಗಿತು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.