ಗಣೇಶ ಚತುರ್ಥಿಯ ಪ್ರಯುಕ್ತ ದ.ಕ. ಜಿಲ್ಲೆಯಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರಕಾರ ಆದೇಶ ಮಾಡಿದೆ.
ರಾಜ್ಯಾದ್ಯಂತ ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಆದರೆ ದ.ಕ. ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18 ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ತೀರ್ಮಾನ ತೆಗೆದುಕೊಳ್ಳುವಂತೆ ಆದೇಶದಲ್ಲಿ ತಿಳಿಸಿದೆ.