ಮಡಪ್ಪಾಡಿ : ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ

0

ಮಡಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸುಳ್ಯ, ಗ್ರಾಮ ಪಂಚಾಯತ್ ಮಡಪ್ಪಾಡಿ ಇದರ ಸಹಯೋಗದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ಯನ್ನು ಸೆ.11ರಂದು ನೀಡಲಾಯಿತು.

ಲಸಿಕಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಹಾಡಿಕಲ್ಲು ಇವರು ಸಾಂಕೇತಿಕವಾಗಿ ಲಸಿಕಾ ಬಾಕ್ಸ್‌ ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಶು ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು, ಪಶುಸಖಿ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಹಾಗೂ ಗ್ರಾಮಸ್ತರು ಹಾಜರಿದ್ದರು.