ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

0

ಶೀಘ್ರದಲ್ಲಿ ಈಶ್ವರ ಮಂಗಲದಲ್ಲಿ ಶಾಖೆ ಉದ್ಘಾಟನೆ: ಇಕ್ಬಾಲ್ ಎಲಿಮಲೆ

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 16ರಂದು ಗಾಂಧಿನಗರ ನಾಯರ್ ವಾಣಿಜ್ಯ ಸಂಕೀರ್ಣದ ವಠಾರದಲ್ಲಿ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷ ಇಕ್ಬಾಲ್ ಎಲಿಮಲೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಘದ ಅಭಿವೃದ್ಧಿ ಕಾರ್ಯಕ್ರಮದ ಕಾರ್ಯವೈಖರ್ಯ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಎಲ್ಲಾ ಸದಸ್ಯರ ಸಹಕಾರ ಮತ್ತು ಪ್ರೋತ್ಸಾಹದಿಂದ ಸಂಘ ಅಭಿವೃದ್ಧಿಯತ್ತ ಚಲಿಸುತ್ತಿದ್ದು ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಿ ಎಲ್ಲಾ ಸದಸ್ಯರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಬ್ಯಾಂಕಿನ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಿದರು.ಸುಳ್ಯದಲ್ಲಿ ಸಂಘದ ಸ್ವಂತ ಕಟ್ಟಡ ನಿರ್ಮಾಣ ಮಾಡುವ ಕುರಿತು ಮಾತನಾಡಿ ಸಂಘದ ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಅತಿ ಶೀಘ್ರವಾಗಿ ಈಶ್ವರಮಂಗಲ ಪರಿಸರದಲ್ಲಿ ನೂತನ ಶಾಖೆಯನ್ನು ಆರಂಭಿಸಿ ಆ ಭಾಗದ ಜನತೆಯ ಸೇವೆಯಲ್ಲಿ ಸಂಘವನ್ನು ತೊಡಗಿಸಿಕೊಳ್ಳುವುದಾಗಿ ಹೇಳಿದರು.

ಸಭೆ ಆರಂಭಕ್ಕೂ ಮುನ್ನ ಗತ ವರ್ಷದಲ್ಲಿ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಿತು.

ಬಳಿಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಐ ವಾರ್ಷಿಕ ವರದಿ ವಾಚಿಸಿದರು. ವರದಿ ಸಾಲಿನಲ್ಲಿ ಸಂಘ ರೂ. 45.08 ಕೋಟಿ ವ್ಯವಹಾರ ನಡೆಸಿ ಸಂಘವು ವಾರ್ಷಿಕ 7 ಲಕ್ಷ ನಿವ್ವಳ ಲಾಭ ಗಳಿಸಿರುವ ಬಗ್ಗೆ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.


ಸಂಘದ ಉಪಾಧ್ಯಕ್ಷ ಮುಹಿಯದ್ದೀನ್ ಹಾಜಿ ಕೆ ಎಂ ವಂದಿಸಿದರು. ವೇದಿಕೆಯಲ್ಲಿ ನಿರ್ದೇಶಕರಾದ ಸಮ್ಸುದ್ದೀನ್ ಎಸ್ ಅರಂಬೂರು, ಇಸ್ಮಾಯಿಲ್ ಪಡ್ಪಿನಂಗಡಿ, ಹಸೈನಾರ್ ಎ ಕೆ ಕಲ್ಲುಗುಂಡಿ, ಉಮ್ಮರ್ ಶಾಪಿ ಕುತ್ತಮಟ್ಟೆ, ಜಾರ್ಜ್ ಡಿಸೋಜ, ಆಮಿನ ಎಸ್ ಜಯನಗರ, ಜೂಲಿಯಾನ ಕ್ರಾಸ್ತಾ ಉಪಸ್ಥಿತರಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಹಿರಿಯ ಮುಖಂಡರುಗಳಾದ ಬಾಪು ಸಾಹೇಬ್,ಹಾಜಿ ಪಿ ಎ ಮಹಮ್ಮದ್, ಟಿ ಎಂ ಶಹೀದ್ ತೆಕ್ಕಿಲ್, ಶರೀಫ್ ಕಂಠಿ, ಸಿದ್ದೀಕ್ ಕೊಕ್ಕೊ ಮೊದಲಾದವರು ಉಪಸ್ಥಿತರಿದ್ದು ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದರು.

ಸಂಘದ ಸಿಬ್ಬಂದಿ ವರ್ಗ ಸಹಕಾರ ನೀಡಿದರು.
ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಕಿರು ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.