ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪರೀಕ್ಷೆ ಫೀಸು ಕಟ್ಟಲಾಗದ ಇಬ್ಬರು ಬಡ ವಿದ್ಯಾರ್ಥಿಗಳಿಗೆ ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಸಹಾಯ ಹಸ್ತ ಚಾಚಿದೆ.
ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಫೀಸು ಕಟ್ಟಲಾಗದೇ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣವನ್ನು ಅರ್ಧದಲ್ಲೇ ಮೊಗಕುಗೊಳಿಸಲು ತಿರ್ಮಾನಿಸಿದ್ದರು. ಇದನ್ನು ಅರಿತ ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಇಬ್ಬರು ವಿದ್ಯಾರ್ಥಿಗಳ ತಲಾ ೩೫೦೦ ಸಾವಿರದಾಗೆ ಒಟ್ಟು ೭೦೦೦ ವನ್ನು ಕಾಲೇಜಿನ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಅವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಗಿರೀಶ್ ಅಡ್ಪಂಗಾಯ, ಕಾರ್ಯದರ್ಶಿ ಸಂತೋಷ್ ರೈ ಕಾನತ್ತಿಲ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರಂಜಿತ್ ಕುಮಾರ್, ಕಾರ್ಯದರ್ಶಿ ರವಿಕುಮಾರ್ ದೊಡ್ಡೇರಿ ಉಪಸ್ಥಿತರಿದ್ದರು.