ಸೂರ್ತಿಲ ಶ್ರೀನಿಧಿ ಮಹಿಳಾ ಮಂಡಲದ 23ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ

0

ಸುಳ್ಯದ ಕಾಯರ್ತೋಡಿ ಸೂರ್ತಿಲ ಶ್ರೀನಿಧಿ ಮಹಿಳಾ ಮಂಡಲದ 23ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವು ಕಾಯರ್ತೋಡಿ ಅಂಗನವಾಡಿ ಕೇಂದ್ರದ ವಠಾರದಲ್ಲಿ ಸೆ.17ರಂದು ನಡೆಯಿತು.

ಶ್ರೀನಿಧಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಶ್ರುತಿ ಮಂಜುನಾಥ ಅವರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ ದಾಮ್ಲೆ ಅವರು ಪದಗ್ರಹಣ ನೆರವೇರಿಸಿದರು. ಸ್ಪರ್ಧಾ ಕಾರ್ಯಕ್ರಮವನ್ನು ಉದ್ಯಮಿ ಕೃಷ್ಣ ಕಾಮತ್ ಅರಂಬೂರು ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀನಿಧಿ ಮಹಿಳಾ ಮಂಡಲದ ನೂತನ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಮೇದಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನ.ಪಂ. ಸದಸ್ಯೆ ಶ್ರೀಮತಿ ಪ್ರವಿತ ಪ್ರಶಾಂತ್ ಆಚಾರ್ಯ, ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್, ರೋಟರಿಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಗಿರೀಶ್ ನಾರ್ಕೋಡು, ಸುಳ್ಯ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಸವಿತ ಗಿರೀಶ್ ಉಪಸ್ಥಿತರಿದ್ದರು.
ಈ ವೇಳೆ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.