ಸುಳ್ಯ ತಾಲೂಕು
ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಇದರ ಸಹಯೋಗದೊಂದಿಗೆ ಬೆಳ್ಳಾರೆಯ ಪನ್ನೆಯಲ್ಲಿ ಶ್ರೀ ವಿಶ್ವಕರ್ಮ ಪೂಜೆ ಮತ್ತು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಸೆ. 17ರಂದು ನಡೆಯಿತು. ಶಾಸಕಿ ಕು. ಭಾಗೀರಥಿ ಮುರುಳ್ಯರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್ ರೈ ಮತ್ತು ಸುಳ್ಯ ತಾಲೂಕು ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಸೋಮಶೇಖರ ಆಚಾರ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವೈದಿಕ ವಿದ್ವಾಂಸರಾದ ಪುರೋಹಿತ ನವೀನ್ ಶರ್ಮ ಧಾರ್ಮಿಕ ಉಪನ್ಯಾಸ ನೀಡಿದರು. ಸುಳ್ಯ ತಹಶಿಲ್ದಾರ್ ಮಂಜುನಾಥ್, ಮತ್ತು ಸಮಿತಿಯ ಕಾರ್ಯದರ್ಶಿ ನಾರಾಯಣ ಎಂ.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಸುಮಾ ವಿ. ಆಚಾರ್ ಪ್ರಾರ್ಥಸಿದರು. ನಾರಾಯಣ ಎಂ.ಆರ್. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಂದಿಸಿದರು. 2022-22ನೇ ಸಾಲಿನ ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಈ ಸಂದರ್ಭದಲ್ಲಿ ವಿತರಿಸಲಾಯಿತು. ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಮಾಜ ಬಾಂಧವರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.