ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸನ್ಮಾನ

0

2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಪ್ರತಿಶತ ಫಲಿತಾಂಶ ಪಡೆದ ಸುಳ್ಯ ರೋಟರಿ ಸಂಸ್ಥೆಯ ಪ್ರಾಂಶುಪಾಲರನ್ನು ಮತ್ತು ಉಪನ್ಯಾಸಕರನ್ನು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ) ಮಂಗಳೂರು ವತಿಯಿಂದ ಸೆ. 17 ರಂದು ಸಂತ ಅಲೋಶಿಯಸ್ ಪ.ಪೂ,ಕಾಲೇಜು ಮಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು.