ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಪಶು ಆಸ್ಪತ್ರೆ ಪಂಜ, ಗ್ರಾಮ ಪಂಚಾಯತ್ ಪಂಜ ಇದರ ವತಿಯಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುವ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮಕ್ಕೆ ಸೆ18 ರಂದು ಪಂಜ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಚಾಲನೆ ನೀಡಿದರು. ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ.ಸೂರ್ಯನಾರಾಯಣ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಸದಸ್ಯ ಚಂದ್ರಶೇಖರ ದೇರಾಜೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಪಶು ಸಂಗೋಪನಾ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.