ಸಂಪಾಜೆ ಸಹಕಾರಿ ಸಂಘದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0


ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಂಪಾಜೆ ಇದರ ಆಶ್ರಯದಲ್ಲಿ ಕೆ ವಿ ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇವರ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೆ.17ರಂದು ಸಂಪಾಜೆ ಸಹಕಾರಿ ಸಂಘದ ಸಮನ್ವಯ ಸಭಾಂಗಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ರವರು ಶಿಬಿರವನ್ನು ಉದ್ಘಾಟಿಸಿದರು.

ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಮತಿ ಶಕ್ತಿವೇಲುರವರು ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಕೆವಿಜಿ ಆಸ್ಪತ್ರೆಯ ಡಾ. ಶ್ವೇತ ರವರು ಉಪಸ್ಥಿತರಿದ್ದರು. ಸುಮಾರು 70ಕ್ಕಿಂತಲೂ ಅಧಿಕ ಜನರು ಶಿಬಿರದ ಪ್ರಯೋಜನವನ್ನು ಪಡೆದರು.