ಸಂಪಾಜೆ ಪಯಸ್ವಿನಿ ಸಹಕಾರಿ ಸಂಘ 3ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ

0


ಕೊಡಗು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸತತ ಮೂರನೇ ಬಾರಿಗೆ ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಗೆ ಆಯ್ಕೆಯಾಗಿದೆ.


ಸಹಕಾರಿ ಸಂಘದ ಅತ್ಯುತ್ತಮ ಕಾರ್ಯ ನಿರ್ವಹಣೆಯನ್ನು ಪರಿಗಣಿಸಿ ಸೆ.20ರಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪಯಸ್ವಿನಿ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.