ಕಳಂಜ ಗ್ರಾಮದ ಅಯ್ಯನಕಟ್ಟೆ ಕ್ರಾಸ್ ಬಳಿ ಆಲ್ಟೋ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಂಬ ಮುರಿದು ಕಾರು ಜಖಂಗೊಂಡ ಘಟನೆ ಇಂದು ಸಂಜೆ ವರದಿಯಾಗಿದೆ.
ಮಹಮ್ಮದ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ. ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗಿತ್ತು. ಕೆ.ಇ.ಬಿ. ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಹೊಸ ಕಂಬ ಹಾಕಿ ರಾತ್ರಿ 8.35ರ ಸುಮಾರಿಗೆ ವಿದ್ಯುತ್ ಪೂರೈಕೆಯನ್ನು ಸರಿಪಡಿಸಿದರು. ಜಖಂಗೊಂಡ ಕಾರನ್ನು ಸುಳ್ಯ ಶೋರೂಂಗೆ ಕೊಂಡೊಯ್ಯಲಾಯಿತು.