ಶ್ರೀ ಗಣಪತಿ ಪ್ರತಿಷ್ಠೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ
ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ,ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 52 ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.19 ರಂದು ಪ್ರಾರಂಭಗೊಂಡಿದ್ದು ಸೆ.20 ರಂದು ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಸೆ.19 ರಂದು ಬೆಳಿಗ್ಗೆ ಗಂಟೆ 8.00 ಕ್ಕೆ ಶ್ರೀ ಗಣಪತಿ ಪ್ರತಿಷ್ಠೆ, 9.00 ರಿಂದ ಸ್ಪರ್ಧೆಗಳು,ಗಣಪತಿ ಹವನ ನಡೆಯಿತು.
ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಮಧ್ಯಾಹ್ನ ಗಂಟೆ 1.00 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 6.00 ಕ್ಕೆ ಧಾರ್ಮಿಕ ಸಭೆ,ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ವಿರಾಟ್ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಅಧ್ಯಕ್ಷತೆ ವಹಿಸಲಿದ್ದಾರೆ.ಬೆಂಗಳೂರಿನ ಯುವ ವಾಗ್ಮಿ ಕು.ಹಾರಿಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಜನ ಗಣ್ಯರು ಉಪಸ್ಥಿತರಿರುವರು.
ಜೇಸಿ ಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ ಇವರನ್ನು ಸನ್ಮಾನಿಸಲಾಗುವುದು.
ರಾತ್ರಿ ಗಂಟೆ 8.00 ರಂಗಪೂಜೆ,ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ಗಂಟೆ 9.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ರಾತ್ರಿ ತುಳು ಹಾಸ್ಯಮಯ ನಾಟಕ “ಗುಸು ಗುಸು ಉಂಡುಗೆ” ನಡೆಯಲಿದೆ.
ಸೆ.20 ರಂದು ಪೂರ್ವಾಹ್ನ ಗಂಟೆ 8.00 ಕ್ಕೆ ಶ್ರೀ ಗಣಪತಿ ಪೂಜೆ,9.00 ರಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಬೆಳ್ಳಾರೆ, ಶ್ರೀ ರಕ್ತೇಶ್ವರಿ ಭಜನಾ ಮಂಡಳಿ ಕೊಳಂಬಳ ಬೆಳ್ಳಾರೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ನಂತರ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ,ಶ್ರೀರಾಮ ಭಜನಾ ಮಂಡಳಿ ತಂಟೆಪ್ಪಾಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಾಯಂಕಾಲ ಮಹಾಪೂಜೆ,ಮಂಗಳಾರತಿ,ಪ್ರಸಾದ ವಿತರಣೆ ನಡೆಯಲಿದೆ.
ಸಾಯಂಕಾಲ ಗಂಟೆ 5.00 ರಿಂದ ಶ್ರೀ ದೇವರ ವಿಜೃಂಭಣೆಯ ಶೋಭಾಯಾತ್ರೆ ನಡೆಯಲಿದೆ.