ಜಾಲ್ಸೂರಿನಲ್ಲಿ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ವೇ. ಮೂ. ಪುರೋಹಿತ ನಯನಕೃಷ್ಣ ಭಟ್ ಅವರ ನೇತೃತ್ವದಲ್ಲಿ ಶ್ರೀ ಗುರುರಾಘವೇಂದ್ರ ಸಭಾಭವನದಲ್ಲಿ ಸೆ.19ರಂದು ಜರುಗಿತು.

ಪ್ರಾತ:ಕಾಲ ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಗಣಪತಿ ಹವನ, ಗಣೇಶ ಮೂರ್ತಿ ಪ್ರತಿಷ್ಠೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ಬಳಿಕ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ನಾಗಸಾನಿಧ್ಯದಲ್ಲಿ ನಾಗತಂಬಿಲ, ಭಜನಾ ಸಂಕೀರ್ತನೆ ನಡೆಯಿತು.
ಈ ಸಂದರ್ಭದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಲಾಯಿತು.


ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ‌ಬಳಿಕ ಶ್ರೀ ವಿಘ್ನನಿವಾರಕನ ಶೋಭಾಯಾತ್ರೆಯು ಜಾಲ್ಸೂರಿನಿಂದ ಹೊರಟಿದ್ದು , ಅಡ್ಕಾರು, ವಿನೋಬನಗರ, ಕೋನಡ್ಕಪದವು, ಅಡ್ಕಾರು ಶ್ರೀ ಸುಬ್ರಹ್ಮಣ್ಯನ ಸನ್ನಿಗೆ ಸಾಗಿ, ಪಯಸ್ವಿನಿ ನದಿ ಕಿನಾರೆಯಲ್ಲಿ ಜಲಸ್ಥಂಭನ ನಡೆಯಲಿದೆ.