ಸುಳ್ಯದ ಶ್ರೀ ರಾಮ ಪೇಟೆಯಲ್ಲಿರುವ ಶ್ರೀರಾಮ ಭಜನಾ ಮಂದಿರದಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗಣೇಶೋತ್ಸವವು ಸೆ. 19 ರಂದು ಜರುಗಿತು.
ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವಾನ ನೆರವೇರಿಸಲಾಯಿತು. ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ ತಂಡದ ಸದಸ್ಯರಿಂದ ಭಜನಾ ಕಾರ್ಯಕ್ರಮವು ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.
ಅಪರಾಹ್ನ ಜಿಲ್ಲೆಯ ಪ್ರಸಿದ್ಧ ಕಲಾವಿದ ಕೂಡುವಿಕೆಯಿಂದ ಜಯಪ್ರಕಾಶ್ ಕಲ್ಮಡ್ಕರವರ ಸಂಯೋಜನೆಯಲ್ಲಿ ವಿಶೇಷ ಆಕರ್ಷಣೆಯ ಕರ್ಣಾರ್ಜುನ ಕಾಳಗ ಎಂಬ ಯಕ್ಷಗಾನ ಬಯಲಾಟ ಪ್ರದರ್ಶನವಾಯಿತು.
ರಾತ್ರಿ ಸ್ಥಳೀಯ ಭಜಕರಿಂದ ಭಜನಾ ಕಾರ್ಯಕ್ರಮವು ಮಹಾಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ
ಪ್ರಸಾದ ವಿತರಣೆಯಾಯಿತು. ಧರ್ಮದರ್ಶಿ ಮಂಡಳಿಯ ಪದಾಧಿಕಾರಿಗಳು ಹಾಗೂ ಸಾಂಸ್ಕೃತಿಕ ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ನೂರಾರು ಸಂಖ್ಯೆಯಲ್ಲಿ ಭಗವದ್ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.