ಸುಳ್ಯ 55 ನೇ ವರ್ಷದ ಗಣೇಶೋತ್ಸವ- ಧಾರ್ಮಿಕ ಸಭೆ , ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

0

ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾಸಮಿತಿ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಆಶ್ರಯದಲ್ಲಿ 55 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಹಾಗೂ ಉತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಹಮ್ಮಿಕೊಂಡ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಸೆ.19 ರಂದು ನಡೆಯಿತು.

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಅಧ್ಯಕ್ಷ ಸೋಮನಾಥ ಕೆ ಅಧ್ಯಕ್ಷತೆ ವಹಿಸಿದ್ದರು.
ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ,ಬದನಾಜೆ ಸರಕಾರಿ ಪ್ರೌಢಶಾಲೆಯ ಶಿಕ್ಷಕ ರಾಮಕೃಷ್ಣ ಭಟ್ ರವರು ಗಣೇಶೋತ್ಸವ ಆಚರಣೆಯ ಮಹತ್ವ ಹಾಗೂ ಆಚಾರ ವಿಚಾರಗಳ ಬಗ್ಗೆ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಮುಖ್ಯ ಅಭ್ಯಾಗತರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯಉಪಸ್ಥಿತರಿದ್ದರು. ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಉಮೇಶ್ ಪಿ.ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಲತಾ ಮಧುಸೂದನ್ ಉಪನ್ಯಾಸಕರ ಪರಿಚಯ ವಾಚಿಸಿದರು. ಖಜಾಂಜಿ ಭರತ್ ಪಿಂಡಿಮನೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಅಧ್ಯಕ್ಷ ಸೋಮನಾಥ ಕೆ.ಸ್ವಾಗತಿಸಿ,
ಪ್ರಧಾನ ಕಾರ್ಯದರ್ಶಿ ಎಂ.ಜೆ.ಶಶಿಧರ ಕೊಯಿಕುಳಿ ವಂದಿಸಿದರು. ಶ್ರೀಮತಿ ಲತಾಶ್ರೀ ಸುಪ್ರಿತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.