ಸೈಂಟ್ ಜೋಸೆಫ್ ಶಾಲೆಯಲ್ಲಿ ತಾಲೂಕು ಕ್ರೀಡಾಕೂಟದ ಪೂರ್ವ ತಯಾರಿ ಸಭೆ ಹಾಗೂ ಡ್ರಗ್ಸ್ ಬಗ್ಗೆ ಮಾಹಿತಿ ಕಾರ್ಯಕ್ರಮ

0


ಸೆಪ್ಟೆಂಬರ್ 18ರಂದು ಸುಳ್ಯದ ಸೈಂಟ್ ಜೋಸೆಫ್ ಶಾಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಪೂರ್ವ ತಯಾರಿಯ ಬಗ್ಗೆ ಪೋಷಕರ ಸಭೆಯನ್ನು ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ರೆ. ಫಾ.ವಿಕ್ಟರ್ ಡಿ ಸೋಜಾ ವಹಿಸಿದ್ದರು.

ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಪೋಷಕರ ಸಮಿತಿಯ ಅಧ್ಯಕ್ಷರಾದ ಜೆ.ಕೆ. ರೈ, ಪೂರ್ವ ಪ್ರಾಥಮಿಕ ಶಾಲಾ ಪೋಷಕರ ಸಮಿತಿಯ ಅಧ್ಯಕ್ಷೆ ಭವ್ಯ, ಶಿಕ್ಷಕರ ಕಾರ್ಯದರ್ಶಿಗಳಾದ ಅನಿತಾ ಮಸ್ಕರೇನಸ್ ,ಶೋಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಹಾಯಾರ್ಥವಾಗಿ ಹಮ್ಮಿಕೊಂಡ ಲಕ್ಕಿ ಕೂಪನನ್ನು ಅತಿಥಿಗಳು ಬಿಡುಗಡೆಗೊಳಿಸಿದರು .ಕ್ರೀಡಾಕೂಟದ ವ್ಯವಸ್ಥೆಗೆ ಪೋಷಕರ ವಿವಿಧ ಸಮಿತಿಗಳನ್ನು ರಚಿಸಲಾಯಿತು. ನಂತರ ಸುಳ್ಯದ ಸ್ತ್ರೀರೋಗ ತಜ್ಞೆ ಡಾಕ್ಟರ್ ವೀಣಾ ಡ್ರಗ್ಸ್ ವಿರೋಧಿ ಜಾಗೃತಿಯ ಬಗ್ಗೆ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ವಂದಿಸಿ, ಸಹ ಶಿಕ್ಷಕಿ ಕಲಾವತಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಸಹಕರಿಸಿದರು.