ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾದಿಂದ ಸುಳ್ಯ , ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಗೆ ವರ್ಷದ ನವೀನ ನಾಯಕತ್ವಕ್ಕಾಗಿ ನೀಡುವ ಪ್ರತಿಷ್ಟಿತ 14 ನೇ PRCI ಚಾಣಕ್ಯ ಪ್ರಶಸ್ತಿ ಲಭಿಸಿದೆ. ಸೆ. 21ರಂದು ನವದೆಹಲಿಯ ಚಾಣಕ್ಯಪುರಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಶಂಕರ ಭಾರದ್ವಾಜ್ ಬಾಳಿಲ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾದ ಸಂಯೋಜಕರಾದ ಎಂ.ಬಿ. ಜಯರಾಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.