ಸುಳ್ಯ ಕಸಬಾ ಗ್ರಾಮದ ದುಗ್ಗಲಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮತ್ತು ಪೋಷಣ್ ಮಾಸಾಚರಣೆ ಸೆ.22ರಂದು ನಡೆಯಿತು.
ದುಗ್ಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದುಗ್ಗಲಡ್ಕ ನಮ್ಮ ಕ್ಲಿನಿಕ್ ನ ವೈದ್ಯರಾದ ಡಾ.ಫರ್ಝಾನ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಶಶಿಕಲಾ ರವರು ಪೌಷ್ಟಿಕಾಂಶ ಮತ್ತು ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಪೌಷ್ಟಿಕ ಆಹಾರ ತಯಾರಿಕೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಅಶ್ವಿತ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸದಸ್ಯರಾದ ಯಶೋಧ ಮೂಡೆಕಲ್ಲು ,ಪ್ರೌಢಶಾಲಾ ಶಿಕ್ಷಕರಾದ ಉಣ್ಣಿಕೃಷ್ಣನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಗುಂಪಿನ ಸದಸ್ಯರು ಮತ್ತು ಪುಟಾಣಿ ಮಕ್ಕಳು, ಮಕ್ಕಳ ಪೋಷಕರು, ಕಿಶೋರಿಯರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಹೇಮಂತ್ ಕುಮಾರ್ ಕಂದಡ್ಕ ಮತ್ತು ಶ್ರೀ ದುಗ್ಗಲಾಯ ಮತ್ತು ಶ್ರೀನಿಧಿ ಸ್ತ್ರೀ ಶಕ್ತಿ ಗುಂಪಿನವರು ಸಹಕರಿಸಿದರು. ಅಂಗನವಾಡಿ ಪುಟಾಣಿಗಳು ಪ್ರಾರ್ಥಿಸಿದರು.ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚಿತ್ರಾ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಶ್ರೀಮತಿ ಶಾರದಾ ಸಹಕರಿಸಿದರು.ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.