ಕೇರಳ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಸುಳ್ಯದ ಯುವಕ..!

0

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಕೇರಳ ಓಣಂ ಬಂಪರ್ ಲಾಟರಿ 25 ಕೋಟಿ ರೂ. ಭಾರಿ ಮೊತ್ತವನ್ನು ಸುಳ್ಯ ತಾಲೂಕಿನ ಯುವಕನೊಬ್ಬ ಗೆದ್ದಿದ್ದಾನೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಳ್ಳು ಸುದ್ದಿ ಹರಡಿದವರ ವಿರುದ್ಧ ಯುವಕನ ಮನೆಯವರು ಸೆ.22 ರಂದು ಬೆಳ್ಳಾರೆಯಲ್ಲಿ ಪೊಲೀಸ್ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ನಿವಾಸಿ ಗೌತಮ್ ಕುಲ್ಸಿ ಮನೆ (27) ಎನ್ನುವವರು ಸ್ವಂತ ಪಿಕಪ್ ಇರಿಸಿಕೊಂಡು ಅದರಲ್ಲಿ ಚಾಲಕರಾಗಿ ದುಡಿಯುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಅವರಿಗೆ ಕೇರಳ ಓಣಂ ಬಂಪರ್ ಲಾಟರಿ 25 ಕೋಟಿ ರೂ. ಜಯಿಸಿದ್ದಾರೆಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇದರಿಂದ ಯುವಕ ಹಾಗೂ ಅವರ ಮನೆಯವರಿಗೆ ತೀವ್ರ ಮಾನಸಿಕ ಕಿರಿಕಿರಿಯಾಗಿದೆ. ಪ್ರತಿಯೊಬ್ಬರು ಕರೆ ಮಾಡುವುದು ವಿಚಾರಿಸುವುದಕ್ಕೆ ಉತ್ತರ ಕೊಡುವುದಕ್ಕೂ ಕಷ್ಟವಾಗಿದೆ. ಇದರಿಂದ ನೊಂದ ಗೌತಮ್ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರೊಂದನ್ನು ದಾಖಲಿಸಿದ್ದಾರೆ. ತಮ್ಮ ವಿರುದ್ಧ ಅಪಪ್ರಚಾರ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.