ಸುಳ್ಯ ಗಣೇಶೋತ್ಸವದಲ್ಲಿ ರಂಜಿಸಿದ ದಕ್ಷಯಜ್ಞ ಯಕ್ಷಗಾನ ಪ್ರದರ್ಶನ

0

ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ 55ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಪ್ರತಿದಿನ ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸೆ.22 ರಂದು ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ದಕ್ಷಯಜ್ಞ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ನೂರಾರು ಸಂಖ್ಯೆಯಲ್ಲಿ ಪ್ರೇಕ್ಷಕ ಕಲಾಭಿಮಾನಿಗಳು ಸೇರಿದ್ದರು.