ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿಯವರ ಅಧ್ಯಕ್ಷತೆಯಲ್ಲಿ ಸಂಘದ ಸಂತೃಪ್ತಿ ಸಹಕಾರಿ ಸೌಧ ಸಭಾಭವನದಲ್ಲಿ ಸೆ. 23ರಂದು ನಡೆಯಿತು.
ಸಂಘದ ಹಿರಿಯ ಸದಸ್ಯ ಸುಬ್ರಾಯ ಗೌಡ ಪಿ.ಕೆ ದೀಪ ಬೆಳಗಿಸಿ ಸಭಾಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಸ್ವಾಗತಿಸಿದರು. ನಿರ್ದೇಶಕಿ ಶ್ರೀಮತಿ ಯಮುನ ಎಸ್.ಎಲ್ ಪ್ರಾರ್ಥಿಸಿದರು. ಉಪಾಧ್ಯಕ್ಷ ಭರತ್ ನೆಕ್ರಾಜೆ, ನಿರ್ದೇಶಕರಾದ ಅಣ್ಣೋಜಿ ಗೌಡ ಕೆ, ವೆಂಕಟ್ರಮಣ ಕೆ. ವಿ, ಶ್ರೀಮತಿ ಅನಿತಾ ಪಿ. ಆರ್, ಕಿರಣ ಕುಮಾರ್ ಎಂ, ಕೇಶವ ಆಚಾರ್ಯ, ಶ್ರೀನಿವಾಸ ಆಚಾರ್ಯ, ಗಿರೀಶ ಎಂ. ಶ್ರೀಮತಿ ಯಮುನ ಎಸ್, ಶ್ರೀಮತಿ ವೇದಾವತಿ ಕೆ, ರಮೇಶ ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕೆ. ಆರ್. ವಾರ್ಷಿಕ ವರದಿ ವಾಚಿಸಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶೇಖರ್ ಕೇದಿಗೆಬನ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.
ಸಿಬ್ಬಂದಿ ಗುರುಪ್ರಸಾದ್ ವರದಿ ಸಾಲಿನಲ್ಲಿ ನಿಧನ ಹೊಂದಿದ ಸಂಘದ ಸದಸ್ಯರ ಹೆಸರು ಓದಿ ಹೇಳಿದರು. ಬಳಿಕ ಮೌನಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಸದಸ್ಯರು ಸಭೆಯಲ್ಲಿ ಪಾಳ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಅವಧಿ ಮೀರಿದ ಸಾಲ ವಸೂಲಾತಿಗೆ ಸಾಲಗಾರರ ಮನೆಗೆ ಹೋಗಿ ಮನವರಿಕೆ ಮಾಡಲು ಪ್ರಯತ್ನಿಸಿದ್ದೇವೆ. ಆದರೆ ಅವರಿಂದ ಸರಿಯಾದ ಪ್ರತಿಕ್ರಿಯೆ ಬರುತ್ತಿಲ್ಲ. ಹಾಗಾಗಿ ಸಂಘದ ಅಭಿವೃದ್ಧಿಯ ದೃಷ್ಟಿಯಿಂದ ಅಂತ ಸಾಲ ವಸೂಲಾತಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು. 2023ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಸನ್ಮಾನಿಸಲಾಯಿತು.
ಸುಬ್ರಹ್ಮಣ್ಯ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯಾಗಿ ವರ್ಗಾವಣೆಗೊಂಡ ಅನುರಾಧಾ ನೆಕ್ರಾಜೆಯವರಿಗೆ ಈ ಸಂದರ್ಭದಲ್ಲಿ ಗೌರವಾರ್ಪಣೆ ಮಾಡಲಾಯಿತು. ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಸಂಘದ ನಿರ್ದೇಶಕ ವೆಂಕಟ್ರಮಣ ಕೆಂಬ್ರೋಳಿ ವಂದಿಸಿದರು. ಸಂಘದ ಸಿಬ್ಬಂದಿಗಳು ಸಹಕಾರ ನೀಡಿದರು.