ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಚಲಿಸುತ್ತಿದ್ದ ಕಾರಿನ ಹಿಂಭಾಗಕ್ಕೆ ಗುದ್ದಿದ ಸ್ಕೂಟಿ

0

ಸ್ಕೂಟಿ ಸವಾರನಿಗೆ ಗಾಯ

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಸಂಭವಿಸಿದ ಘಟನೆ ಸೆಪ್ಟೆಂಬರ್ 23ರಂದು ರಾತ್ರಿ ಸಂಭವಿಸಿದೆ..

ಘಟನೆಯಿಂದ ಸ್ಕೂಟಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟಿಯ ಮುಂಭಾಗ ಮತ್ತು ಕಾರಿನ ಹಿಂಭಾಗ ಜಕಂಗೊಂಡಿದ್ದು, ಮಳೆ ಬಂದ ಹಿನ್ನೆಲೆಯಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ..