ಸುಳ್ಯ ಮರಾಟಿ ಸಂಘದಲ್ಲಿ ಗಣಪತಿ ಹವನ, ಶ್ರೀ ಸತ್ಯನಾರಾಯಣ ದೇವರ ಪೂಜೆ

0

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣಪತಿ ಹವನ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜೆ ಸೆ. 24ರಂದು ಸಂಘದ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.


ಬೆಳಿಗ್ಗೆ ಅಭಿರಾಮ್ ಭಟ್ ಅರಂಬೂರುರವರ ನೇತೃತ್ವದಲ್ಲಿ ಶ್ರೀ ಗಣಪತಿ ಹವನ, ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರಗಿತು. ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಹಿಳಾ ವೇದಿಕೆ, ಯುವ ವೇದಿಕೆ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.