ದಸರಾ ಕ್ರೀಡಾಕೂಟದಲ್ಲಿ ತಾಲೂಕಿನವರಿಗೆ ಅವಕಾಶ ಕಲ್ಪಿಸಿ:ಭಾಗೀರಥಿ ಮುರುಳ್ಯ
ದ.ಕ ಜಿಲ್ಲಾಡಳಿತ, ದ.ಕ. ಜಿ.ಪಂ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಳ್ಯ ತಾ.ಪಂಚಾಯತ್, ಪಂಜ ಗ್ರಾಮ ಪಂಚಾಯತ್, ಸುಳ್ಯ ಯುವ ಜನ ಸಂಯುಕ್ತ ಮಂಡಳಿ, ಪಂಜ ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ಪಂಜ ಸ.ಪ.ಪೂ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಸೆ.೨೪ ರಂದು ನಡೆದ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಿತು.
ಶಾಸಕಿ ಭಾಗೀರಥಿ ಮುರುಲ್ಯ ಕ್ರೀಡಾಕೂಟ ಉದ್ಘಾಟೊಇಸಿ, ಱಱತಾಲೂಕು ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ತಾಲೂಕಿನವರಿಗೆ ಮಾತ್ರ ಆಡಳು ಅವಕಾಶ ಇರಲಿ. ಜಿಲ್ಲಾ ಮಟ್ಟzಲ್ಲಿ ಜಿಲ್ಲೆಯ ಎಲ್ಲರಿಗೂ ಅವಕಾಶ ಇರುತ್ತದೆ ಎಂದ ಅವರು, ಮುಂದಿನ ದಿನಗಳಲ್ಲಿ ದಸರಾ ಕ್ರೀಡಾ ಕೂಟಕ್ಕೆ ಸರಕಾರದಿಂದ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಅವರು ಹೇಳಿದರು.
ಪಂಜ ಗ್ರಾ. ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಜ ಸ.ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ವೆಂಕಪ್ಪ ಕೇನಾಜೆ, ನಿವೃತ್ತ ಯುವ ಸಬಲೀಕರಣ ಕ್ರೀಡಾಧಿಕಾರಿ ಮಾಧವ ಬಿ.ಕೆ., ಯುವ ಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ತೇಜಸ್ವಿ ಕಡಪಳ, ಹಿರಿಯ ಕ್ರಿಡಾಪಟು ಕುಶಾಲಪ್ಪ ಗೌಡ ದೊಡ್ಡಮನೆ, ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡಾಕೂಟದ ಸಂಯೋಜಕರದ ಯೋಗೀಶ್ ಚಿದ್ಗಲ್, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಶರತ್ ಕುದ್ವ, ಉಪಸ್ಥಿತರಿದ್ದರು.
ಯುವ ಜನ ಸೇವಾ ಕ್ರೀಡಾ ಇಲಾಖೆಯ ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಪವನ್ ಪಲ್ಲತ್ತಡ್ಕ ವಂದಿಸಿದರು.
ಪಂಜದಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಪುತ್ತೂರು ತಾಲೂಕಿನ ಕ್ರೀಡಾಪಟುಗಳು ಹೆಸರು ನೋಂದಾಯಿಸಿದರೆಂದೂಮ ಇದಕ್ಕೆ ತಾಲೂಕಿನ ಕೆಲಸ ಕ್ರೀಡಾ ಪಟುಗಳು ಆಕ್ಷೇಪಿಸಿ ಸುಳ್ಯ ತಾಲೂಕು ದಸರಾ ಕ್ರೀಡಾಕೂಟದಲ್ಲಿ ತಾಲೂಕಿನವರಿಗೆ ಮಾತ್ರ ಅವಕಾಶ ನೀಡಬೇಕೆಂದು, ಯುವಜನ ಸೇವಾ ಕ್ರೀಡಾಧಿಕಾರಿ ದೇವರಾಜ ಮುತ್ಲಾಜೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರ ಗಮನಕ್ಕೆ ತರಲಾಯಿತು. ಬಳಿಕ ಸಮಾಲೋಚನೆ ನಡೆದು ತಾಲೂಕಿನವರಿಗೆ ಮಾತ್ರ ಅವಕಾಶ ಕಲ್ಪಿಸುವ ನಿರ್ಧಾರಕ್ಕೆ ಬರಲಾಯಿತೆಂದು ತಿಳಿದು ಬಂದಿದೆ.
ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಮವಸ್ತ್ರ ವನ್ನು ಯೋಗೀಶ್ ಪೂಜಾರಿ ಪಿಡಬ್ಲ್ಯೂಡಿ ಗುತ್ತಿಗೆದಾರರು ನೀಡಿದರು.
ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ಮಂಗಳೂರು ಇದರ ಹರೀಶ್ ಮೆದು ಟ್ರೋಫಿ ದಾನಿಗಳಾಗಿ ಸಹಕರಿಸಿದರು.