ಸುಳ್ಯ ರೋಟರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0


ಸೆಪ್ಟೆಂಬರ 24 ರಂದು ಕೋಟಿ ಚೆನ್ನಯ ಕ್ರೀಡಾಂಗಣ ಪಂಜದಲ್ಲಿ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ, ಒಟ್ಟು 14 ಪದಕಗಳನ್ನು ಪಡೆದಿದ್ದು, ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ನವೆಂಬರ 01 ರಂದು ನಡೆಯಲಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಸಂಸ್ಥೆಯ ದ್ವಿತೀಯ ಪಿಯುಸಿಯ ಕಾಮರ್ಸ ನ ವಿದ್ಯಾರ್ಥಿ ಧ್ರುವ ಟಿ ಎಸ್ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ಪ್ರಥಮ ,ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನಗಳಿಸಿ ಚಾಂಪಿಯನ್ ಆಗಿರುತ್ತಾನೆ. ದ್ವಿತೀಯ ಪಿಯುಸಿಯ ವಿಜ್ಞಾನದ ವಿದ್ಯಾರ್ಥಿ ನಿಹಾರ ಕೆ ಬಿ ಎತ್ತರ ಜಿಗಿತದಲ್ಲಿ ದ್ವಿತೀಯ , 200 ಮೀಟರ್ ಓಟದಲ್ಲಿ ತೃತೀಯ , ದ್ವಿತೀಯ ಪಿಯುಸಿಯ ವಿಜ್ಞಾನದ ವಿದ್ಯಾರ್ಥಿ ಸುಮಂತ ಕೆ ಬಿ 800 ಮೀಟರ್ ಓಟದಲ್ಲಿ ದ್ವಿತೀಯ, ಧ್ರುವ ಟಿ ಎಸ್ , ನಿಹಾರ ಕೆ ಬಿ , ಸುಮಂತ ಕೆ ಬಿ, ಗೌರವ ನಿಡ್ಯಮಲೆ 4×100 ಮೀಟರ್ ರಿಲೇಯಲ್ಲಿ ಪ್ರಥಮ ಹಾಗೂ 4×400 ಮೀಟರ್ ರಿಲೇ ಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.