ಬಳ್ಪ ಗ್ರಾ.ಪಂ. ವ್ಯಾಪ್ತಿಯಲ್ಲಿ “ಸ್ವಚ್ಛತಾ ಹೀ ಸೇವೆ ” ಅಭಿಯಾದಡಿ ವಿವಿಧ ಸ್ಥಳಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ, ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಗಾರ ಹಾಗೂ ಅಂಗಾಂಗ ದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ ಸೆ. 25ರಂದು ನಡೆಯಿತು.
ಗ್ರಾಮ ಪಂಚಾಯತ್ ವತಿಯಿಂದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀ ರಘು ಎನ್. ಬಿ. ರವರು ಸ್ವಚ್ಛತೆ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳ್ಪ ಗ್ರಾ. ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ ವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೇನ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಕು. ಪೃಥ್ವಿ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಪಾರ್ವತಿ. ಪಿ. ಡಿ ಹಾಗೂ ಸದಸ್ಯರುಗಳಾದ ಶ್ರೀಮತಿ ಶಶಿಕಲಾ ಸೂಂತಾರು , ಶ್ರೀಮತಿ ನೇತ್ರಾವತಿ ಹೊಪ್ಪಾಳೆ, ಶ್ರೀಮತಿ ಶೈಲಜಾ ಎಣ್ಣೆ ಮಜಲು, ಶ್ರೀಮತಿ ಸುನೀತಾ ಸಂಪ್ಯಾಡಿ, ಶ್ರೀ ರಾಜೀವ ಕಣ್ಕಲ್, ಆರೋಗ್ಯ ಇಲಾಖೆ ಯ ಬಳ್ಪ ಮತ್ತು ಕೇನ್ಯದ ಅರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಎಮ್ ಬಿ ಕೆ ಯವರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿ ಸಂಜೀವ.ಕೆ ಸ್ವಾಗತಿಸಿ, ಪ್ರಭಾರ ಪಂಚಾಯತ್ ಅಭಿವೃದ್ದಿ ಆಧಿಕಾರಿ ರಘು
ಎನ್.ಬಿ ವಂದಿಸಿದರು.