ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಗ್ರಹಣ ಸಮಾರಂಭ

0

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ೨೦೨೩-೨೫ ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ.೨೪ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ ವಹಿಸಿದ್ದರು.
ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಹರಿಣಿ ಸದಾಶಿವ ಪದಗ್ರಹಣ ನೆರವೇರಿಸಿದರು. ಸುಳ್ಯ ಸಿಡಿಪಿಒ ಶೈಲಜಾ ದಿನೇಶ್ ಮುಖ್ಯ ಅತಿಥಿಗಳಾಗಿದ್ದರು.
ನೂತನ ಅಧ್ಯಕ್ಷೆ ಮಧುಮತಿ ಬೊಳ್ಳೂರು ಎಲ್ಲರ ಸಹಕಾರ ಕೋರಿದರು.

ಉಪಾಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಮಹಿಳೆಯರಿಗೆ ಮನೋರಂಜನಾ ಸ್ಪರ್ಧಾ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರನ್ನು ಸನ್ಮಾನಿಸಲಾಯಿತು.
ಪೂರ್ವಿ ದಾಮ್ಲೆ ಪ್ರಾರ್ಥಿಸಿದರು.

ನೂತನ ಸಮಿತಿಯ ಕೋಶಾಧಿಕಾರಿ ಚಂದ್ರಾಕ್ಷಿ ಜೆ ರೈ ಸ್ವಾಗತಿಸಿ, ಕಾರ್ಯದರ್ಶಿ ಅಮಿತಾ ಸುತ್ತಕೋಟೆ ವಂದಿಸಿದರು. ಚಿತ್ರಲೇಖ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.