ಸುಬ್ರಹ್ಮಣ್ಯ:ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ

0

ಬಾಲಕ-ಬಾಲಕಿಯರಲ್ಲಿ ಬೆಳ್ತಂಗಡಿ ಚಾಂಪಿಯನ್ಸ್

ಶಾಲಾ ಶಿಕ್ಷಣ ಇಲಾಖೆ ದ.ಕ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ಸೆ.25 ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದ ಎರಡೂ ವಿಭಾಗದಲ್ಲೂ ಬೆಳ್ತಂಡಿ ತಾಲೂಕು ಪ್ರಥಮ ಸ್ಥಾನ ಗಳಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ಅಂತಿಮ ಹಣಾಹಣಿಯಲ್ಲಿ ಬೆಳ್ತಂಗಡಿ ತಂಡವು ಬಾಲಕರ ವಿಭಾಗದಲ್ಲಿ ಮೂಡಬಿದ್ರೆ ತಂಡವನ್ನು ಮತ್ತು ಬಾಲಕಿಯರ ವಿಭಾಗದಲ್ಲಿ ಮಂಗಳೂರು ತಂಡವನ್ನು ಸೋಲಿಸಿ ಪ್ರಶಸ್ತಿಯ ಪಡೆಯಿತು.

ಬಾಲಕರ ವಿಭಾಗದ ಅಂತಿಮ ಹಣಾಹಣೆಯಲ್ಲಿ ಬೆಳ್ತಂಗಡಿಯ ಎಸ್‌ಡಿಎಂಸಿ ಉಜಿರೆ ಯು ಮೂಡಬಿದ್ರೆ ತಾಲೂಕಿನ ಆಳ್ವಾಸ್ ಮೂಡಬಿದ್ರೆಯನ್ನು ಸೋಲಿಸಿತು.
ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ.ಪೂ ಕಾಲೇಜು ತಂಡ ಪ್ರಥಮ ಹಾಗೂ ಮಂಗಳೂರು ತಾಲೂಕಿನ ಸಂತ ಅಲೋಷಿಯಸ್ ಕಾಲೇಜು ಮಂಗಳೂರು ದ್ವಿತೀಯ ಸ್ಥಾನಿಯಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಬೆಂಗಳೂರು, ದ.ಕ ಜಿಲ್ಲಾ ಕ್ರೀಡಾ ಸಂಯೋಜಕ ಅರುಣ್ ಡಿಸೋಜಾ, ಜಿಲ್ಲಾ ಕಬಡ್ಡಿ ರೆಫ್ರಿ ಎಸೋಸಿಯೇಶನ್‌ನ ಅಧ್ಯಕ್ಷ ಶಿವರಾಮ ಯೇನೆಕಲ್ಲು, ಗ್ರಾ.ಪಂ.ಉಪಾಧ್ಯಕ್ಷ ವೆಂಕಟೇಶ್ ಎಚ್.ಎಲ್, ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್,

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಗಿರಿಧರ್ ಸ್ಕಂಧ, ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯಕ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಚಿದಾನಂದ ಕಂದಡ್ಕ, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್,ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್ ಆರ್ ವಿಜೇತರಿಗೆ ಬಹುಮಾನ ವಿತರಿಸಿದರು.ಕಡಬ, ಸುಳ್ಯ,ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮಂಗಳೂರು, ಮೂಲ್ಕಿ ತಾಲೂಕಿನ ಬಾಲಕ ಮತ್ತು ಬಾಲಕಿಯರ ತಂಡಗಳು ಚಾಂಪಿಯನ್‌ಶಿಪ್ ಭಾಗವಹಿಸಿದ್ದವು.

ಬೆಳಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಂದ್ಯಾಟ ವನ್ನು ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಸುಜಾತಾ ಕಲ್ಲಾಜೆ ಉದ್ಘಾಟಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಬೆಂಗಳೂರು,
ದ.ಕ ಜಿಲ್ಲಾ ಕ್ರೀಡಾ ಸಂಯೋಜಕ ಅರುಣ್ ಡಿಸೋಜಾ ಮುಖ್ಯ ಅತಿಥಿಗಳಾಗಿದ್ದರು.