ಕನಕಮಜಲು ಗ್ರಾ.ಪಂ.ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಸ್ವಚ್ಛತಾ ಕಾರ್ಯ

0

ಕನಕಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಪ್ರಯುಕ್ತ ಗ್ರಾಮ ಪಂಚಾಯತಿ ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಸ್ವಚ್ಛತಾ ಕಾರ್ಯವನ್ನು ಸೆ‌.26ರಂದು ನಡೆಸಲಾಯಿತು.

ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಮಟ್ಟದ ಶ್ರೀಹರಿ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.