ಮಂಡೆಕೋಲು ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಮತ್ತು ಆರೋಗ್ಯ ಮಾಹಿತಿ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ

0

ಕರ್ನಾಟಕ ಸರ್ಕಾರ, ಗ್ರಾಮ ಪಂಚಾಯತ್ ಮಂಡೆಕೋಲು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಅರಂತೋಡು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ವಲಯ ಮಹಾವಿಷ್ಣು ಸ್ತ್ರೀ ಶಕ್ತಿ ಗೊಂಚಲು ಸಮಿತಿ ಮಂಡೆಕೋಲು ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಸೆ.25 ರಂದು ಮಂಡೆಕೋಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಾವಿಷ್ಣು ಗೊಂಚಲಿನ ಅಧ್ಯಕ್ಷರಾದ ಶ್ರೀಮತಿ ಸತ್ಯವತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.


ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರತಿಮಾ ಹೆಬ್ಬಾರ್ ಕಾರ್ಯಕ್ರಮದಲ್ಲಿದ್ದು ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರಮೇಶ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಯಾದ ಶ್ರೀಮತಿ ಪ್ರಮೀಳ ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಪೌಷ್ಟಿಕತೆ ಬಗ್ಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದರು.

ಶಿಶು ಅಭಿವೃದ್ಧಿ ಇಲಾಖೆಯ ಸುಳ್ಯ ವಲಯದ(ಪ್ರಭಾರ)ಮೇಲ್ವಿಚಾರಕಿಯಾರಾದ ಶ್ರೀಮತಿ ಉಷಾ ಇವರು ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿಯಾದ ಶ್ರೀಮತಿ ಭವಾನಿಯವರು ನಿಫಾ ವೈರಸ್ ಬಗ್ಗೆ ಮಾಹಿತಿ ನೀಡಿದರು. ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಪೌಷ್ಟಿಕ ಆಹಾರ ಪ್ರದರ್ಶನ ನಡೆಸಿ ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲ ಸದಸ್ಯರಿಗೂ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು.

ಬ್ಲಾಕ್ ಸೊಸೈಟಿ ಉಪಾಧ್ಯಕ್ಷರಾದ ಶ್ರೀಮತಿ ವಸಂತಿ ಉಗ್ರಾಣಿಮನೆ ಇವರು ಕಾರ್ಯಕ್ರಮ ನಿರೂಪಿಸಿದರು. ಕು.ಪುಷ್ಪಾವತಿಯವರು ಪ್ರಾರ್ಥನೆ ನೆರವೇರಿಸಿದರು. ಮಮತಾ ಪೇರಾಲು ಸ್ವಾಗತಿಸಿ. ಪದ್ಮಾವತಿ ಪೆರಾಜೆ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕಿಯರು, ಆಶಾಕಾರ್ಯಕರ್ತೆಯರು, ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು