ಯೇನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

0

ದ.ಕ. ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ದ.ಕ. ಜಿಲ್ಲೆ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಧಿಕಾರಿಯವರ ಕಛೇರಿ, ಸುಳ್ಯ ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ಏನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ಸೆ. 27ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಜಿಲ್ಲಾ ಮಟ್ಟದ ತ್ರೋ ಬಾಲ್ ಪಂದ್ಯಾಟ 2023-24 ಕಾರ್ಯಕ್ರಮವನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಪಂದ್ಯಾಟದಲ್ಲಿ ಭಾಗವಹಿಸಲು ಆಗಮಿಸಿದ ಏಳು ತಾಲೂಕಿನ ತಂಡಕ್ಕೆ ಶುಭಹಾರೈಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ ರಮೆಶ್, ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ, ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ವಿವಿಧ ಶಾಲೆಗಳ ದೈ.ಶಿ.ಪರಿವೀಕ್ಷಕರು, ಶಿಕ್ಷಣ ಸಂಯೋಜಕಿ ಶೀಲತ್, ರಾಮಕೃಷ್ಣ ಮಲ್ಲಾರ, ಯೇನೆಕಲ್ಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ
ಲಕ್ಪ್ಮೀನಾರಾಯಣ, ನಿಕಟಪೂರ್ವ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ನಿವೃತ್ತ ದೈಹಿಕ ನಿರ್ದೇಶಕ ತುಕಾರಾಂ ಯೇನೆಕಲ್ಲು ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈ.ಶಿ.ಪರಿವೀಕ್ಷಕರಾದ ಸೂಫಿ ಪೆರಾಜೆ ಸ್ವಾಗತಿಸಿ ಗಣೇಶ್ ಪಿ. ವಂದಿಸಿದರು.