ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಅಧಿಕಾರಿಗಳ ಸಂಘ ಸುಳ್ಯ ಮತ್ತು ಸಾವಾ ವೆಟ್ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಪಶು ಆಸ್ಪತ್ರೆ ಸುಳ್ಯ ದಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗನಿರೋಧಕ ಲಸಿಕಾ ಕಾರ್ಯಕ್ರಮ ಮತ್ತು ಒಳ ಮತ್ತು ಹೊರ ಪರೋಪ ಜೀವಿಗಳ ನಿವಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಆಡಳಿತ ವೈದ್ಯಾಧಿಕಾರಿಗಳಾದ ಡಾ. ಕೆ ವಿ ಕರುಣಾಕರ, ಸರಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ ಜೂನಿಯರ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ, ಹಿರಿಯ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಶ್ರೀಮತಿ ರಶ್ಮಿ ಕೆ. ಎಂ, ಸುಳ್ಯ ವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ ಎನ್ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಮಾರು 40ಕ್ಕೂ ಹೆಚ್ಚು ನಾಯಿಗಳಿಗೆ ಉಚಿತವಾಗಿ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ಹಾಕಲಾಯಿತು. ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ನಿತೀನ್ ಪ್ರಭು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು