ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಹಿಂದಿ ದಿನಾಚರಣೆ ಕಾರ್‍ಯಕ್ರಮ ವನ್ನು ಸೆ. ೧೪ರಂದು ಹಮ್ಮಿಕೊಳ್ಳಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕರಾದ ಶ್ರೀಧರ ಹೆಗ್ಡೆ ಕಾರ್‍ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಧರ ಹೆಗ್ಡೆ ಇವರು ವಿದ್ಯಾರ್ಥಿಗಳಿಗೆ ರಚನಾತ್ಮಕ ಬರವಣಿಗೆ ಕುರಿತಾಗಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕೆಲವೊಂದು ಕವನಗಳನ್ನು ಬರೆದು ವಾಚಿಸಿದರು. ಹಿಂದಿ ದಿವಸದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆಗಳನ್ನು ಹಮ್ಮಿಕೊಳ್ಳಲಾಯಿತ ವಿಜೇತ ವಿದ್ಯಾರ್ಥಿಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದವರಿಗೆ ಈ ಸಂದರ್ಭದಲ್ಲಿ ಬಹುಮಾನ ನೀಡಿ ಗೌರವಿಸಲಾಯಿತು. ಹಿಂದಿ ಎಂ.ಎ ಪದವಿ ವ್ಯಾಸಂಗ ಮಾಡಿ ಇದೀಗ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ವಿನೋದ ಕೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಂತರ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ ಜಯಶ್ರೀ, ಹಿಂದಿ ಉಪನ್ಯಾಸಕ ರಾಮಕೃಷ್ಣ ಕೆ ಎಸ್ ಹಿಂದಿ ಸಂಘದ ಅಧ್ಯಕ್ಷ ವಿನ್ಯಾಸ್ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕ ರಾಮಕೃಷ್ಣ ಕೆ ಎಸ್ ಸ್ವಾಗತಿಸಿ ವಿದ್ಯಾರ್ಥಿ ವಿನ್ಯಾಸ್ ವಂದಿಸಿದರು. ವಿದ್ಯಾರ್ಥಿ ಪಂಚಮಿ ಕಾರ್‍ಯಕ್ರಮ ನಿರೂಪಿಸಿದರು.