ಸುಳ್ಯ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಗಾಂಧಿ ಜಯಂತಿ ಹಾಗೂ ಬೀಳ್ಕೊಡುಗೆ ಸಮಾರಂಭ ಅ.2ರಂದು ನಡೆಯಿತು.
ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಅಧ್ಯಕ್ಷ ಚಂದ್ರಾ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ ಪಿ.ಸಿ., ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಗಳಾಗಿದ್ದರು. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಭಾಷಾ ಶಿಕ್ಷಕಿ ಶ್ರೀಮತಿ ಚಂದ್ರಮತಿ ಪ್ರಧಾನ ಭಾಷಣ ಮಾಡಿದರು. ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ಮಿಶ್ರಿಯ ರಿಗೆ ಬೀಳ್ಕೊಡುಗೆ ಮಾಡಲಾಯಿತು. ಹಾಗೂ ಈ ಕಾರ್ಯಕ್ರಮದಲ್ಲಿ ಪಿ. ಎಸ್. ಗಂಗಾಧರ, ಬೆಳ್ಯಪ್ಪ ಗೌಡ , ಸುರೇಶ್ ಅಮೈ , ಶಿವರಾಮ್ ಮಡಪ್ಪಾಡಿ ಹಾಗೂ ಪೋಷಕ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪೂಜಾ ರವರು ಉಪಸ್ಥಿತರಿದ್ದರು. ಹಾಗೆಯೇ ಪೋಷಕರು , ಶಿಕ್ಷಕವೃಂದ, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಭಾವನ ಕುರುಂಜಿ ವಂದಿಸಿದರು. ಅನಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.