ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ವಿದ್ಯಾ ಬೋಧಿನೀ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿಯನ್ನು ಆಚರಿಸಲಾಯಿತು.
ಪ್ರಾರಂಭದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು .

ನಂತರವಿದ್ಯಾಬೋಧಿನೀ ಸ್ಕೌಟ್ – ಗೈಡ್ ದಳದಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಶ್ರೀ ಪಿ ಜಿ ಎಸ್ ಎನ್ ಪ್ರಸಾದ್ ಶಾಲಾ ಸಂಚಾಲಕರು, ಉಪಸ್ಥಿತರಿದ್ದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆಯನ್ನು ಕೊಂಡಾಡಿದರು.
ಶ್ರೀ ಯಶೋಧರ ಎನ್’ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.. ಶ್ರೀ ಅರವಿಂದ ಕೆ.ಜಿ. ಕಂಪ್ಯೂಟರ್ ಶಿಕ್ಷಕರು
ವಂದನಾರ್ಪಣೆಗೈದ ಕಾರ್ಯಕ್ರಮವನ್ನು ಶ್ರೀಮತಿ ಸಹನಾ ಬಿ.ಬಿ. ಸಹಶಿಕ್ಷಕಿ ನಿರ್ವಹಿಸಿದರು. ಶಾಲಾ ಅಧ್ಯಾಪಕ ವೃಂದದವರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು