ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ನಿಂದ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

0

ಕೆವಿಜಿ ಪಾಲಿಟೆಕ್ನಿಕ್ ನ ಎನ್‌ ಎಸ್‌ ಎಸ್ ಹಿರಿಯ ವಿದ್ಯಾರ್ಥಿಗಳ ಸಂಘ “ಸೇವಾ ಸಂಗಮ ಟ್ರಸ್ಟ್ (ರಿ.) ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ನಡೆಯಿತು.


ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ , ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿದ್ದರು .ನಿವ್ರತ್ತ ಜಿಲ್ಲಾ ನ್ಯಾಯಾಧೀಶ ಮನಮೋಹನ ಬನಾರಿ , ಕಾವು ಲಯನ್ಸ್ ಕ್ಲಬ್ ಅಧ್ಯಕ್ಷ ದಿವ್ಯನಾಥ ಶೆಟ್ಟಿ , ಕಾಪು ಕ್ಲಸ್ಟರ್ ನ ಸಿ .ಆರ್ ಪಿ. ಪ್ರಸಾದ್ ಕೆ.ವಿ.ಎಲ್.ಎನ್ , ಎನ್.ಎಸ್.ಎಸ್ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯೆ ಡಾ. ಅನುರಾಧಾ ಕುರುಂಜಿ, ಎನ್.ಎಸ್.ಎಸ್ ಸೇವಾ ಸಂಗಮದ ಗೌರವಾಧ್ಯಕ್ಷ ಬಾಲಕೃಷ್ಣ ಗೌಡ ಬೊಳ್ಳೂರು, ಎಸ್. ಡಿ. ಎಮ್. ಸಿ .ಅಧ್ಯಕ್ಷ ಯತಿನ್ ಪೂಜಾರಿ, ಗ್ರಾಮ ಪಂಚಾಯತಿ ಸದಸ್ಯ ಅಬ್ದುಲ್ ರಹಿಮಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತಾ, ಸೇವಾ ಸಂಗಮದ ಅಧ್ಯಕ್ಷ ರಕ್ಷಿತ್ ಬೊಳ್ಳೂರು ಹಾಗೂ ಕಾರ್ಯದರ್ಶಿ, ವಿಶ್ವಕಿರಣ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾ ಸಂಗಮದ ಸದಸ್ಯ ಪ್ರಶಾಂತ್ ಅಜ್ಜಿಕಲ್ ಸ್ವಾಗತಿಸಿ, ಕಾರ್ಯದರ್ಶಿ ವಿಶ್ವಕಿರಣ ವಂದಿಸಿದರು.ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ಒಂದು ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ, ಉಚಿತ ಆರೋಗ್ಯ ತಪಾಸಣಾ ಶಿಬಿರ , ಕೃಷಿ ಉಪಕರಣಗಳ ಮಾರಾಟ ಮತ್ತು ಪ್ರದರ್ಶನ, ಸಿರಿದಾನ್ಯಗಳ ಪ್ರದರ್ಶನ ಮತ್ತು ಮಾರಾಟ, ಸ್ಥಳೀಯರಿಗೆ ಮತ್ತು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

ಸಮಾರೋಪ :
ಕಾರ್ಯಕ್ರಮದ ಸಮಾರೋಪ ವು ಬಾಲಕೃಷ್ಣ ಗೌಡ ಬೊಳ್ಳೂರು ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಎನ್.ಆರ್. ಗಣೇಶ್ ,ನಿವೃತ್ತ ಕಚೇರಿ ಅಧೀಕ್ಷಕ ರಾಮಚಂದ್ರಗೌಡ ಪಲ್ಲತಡ್ಕ, ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್, ಯತಿನ್ ಪೂಜಾರಿ ಉದ್ಯೋಪಾಧ್ಯಾಯಿನಿ ಸವಿತಾ, ಡಾ. ಅನುರಾಧಾ ಕುರುಂಜಿ , ರಕ್ಷಿತ್ ಬೊಳ್ಳೂರು, ವಿಶ್ವಕಿರಣ್, ಸುಜಿತ್ ಎಂ.ಎಸ್ ಉಪಸ್ಥಿತರಿದ್ದರು.