ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರ ಅಧ್ಯಯನ ಪ್ರವಾಸ

0

ಕಲ್ಲಡ್ಕ ಮ್ಯೂಸಿಯಂ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಭೇಟಿ

ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು. ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿ ಶಿಕ್ಷಕಿಯರು ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿನ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ರಾಜರ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಪರೂಪದ ನಾಣ್ಯಗಳು, ದೇಶ ವಿದೇಶದ ಹಲವು ಬಗೆಯ ಕರೆನ್ಸಿ ನೋಟುಗಳನ್ನು, ವಿವಿಧ ಸಂಗ್ರಹಗಳನ್ನು ವೀಕ್ಷಿಸಿದರು.

ಮ್ಯೂಸಿಯಂನ ಮಹಮ್ಮದ್ ಯಾಸಿರ್ ತನ್ನ ಸಂಗ್ರಹದ ಬಗ್ಗೆ ವಿವರಿಸಿದರು. ಬಳಿಕ ಬಂಟ್ವಾಳದ ಸಂಚಯಗಿರಿಯಲ್ಲಿರುವ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಅಬ್ಬಕ್ಕ ಆರ್ಟ್ ಗ್ಯಾಲರಿ, ತುಳು ಪಾರಂಪರಿಕ ವಸ್ತು ಸಂಗ್ರಹಾಲಯವನ್ನು ವೀಕ್ಷಿಸಿದರು. ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ತುಳುನಾಡಿನ ಐತಿಹಾಸಿಕ ಹಿನ್ನಲೆ ಹಾಗೂ ಅಧ್ಯಯನ ಕೇಂದ್ರದ ಉದ್ದೇಶದ ಬಗ್ಗೆ ವಿವರಿಸಿದರು.