ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0


154 ನೇ ಗಾಂಧಿ ಜಯಂತಿಯ ವಾರ್ಷಿಕ ದಿನಾಚರಣೆಯ ಅಂಗವಾಗಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಮತ್ತು ಅಮರ ಸಂಘಟನ ಸಮಿತಿ ಹಾಗೂ ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ – ಒಂದು ಹೆಜ್ಜೆ ಸ್ವಚ್ಛತೆಯ ಕಡೆ ಎನ್ನುವ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ವಿದ್ಯಾರ್ಥಿಗಳು ಜ್ಯೋತಿ ಸರ್ಕಲ್ ನಿಂದ, ಗಾಂಧಿನಗರ, ರಥಬೀದಿಯಿಂದಾಗಿ ಎ ಪಿ ಎಂ ಸಿ ಯ ವರೆಗೆ ಕಸ ಸಂಗ್ರಹಿಸಿ, ನಗರ ಪಂಚಾಯಿತಿಯ ಸಹಕಾರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಯಿತು.