ಆಲೆಟ್ಟಿ: ಪ್ರಣವ ಫೌಂಡೇಶನ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶ್ರೀಮತಿ ರೇವತಿ ಅವರಿಗೆ ಶಾಲಾ ವತಿಯಿಂದ ಸನ್ಮಾನ

0

ಪ್ರಣವ ಫೌಂಡೇಶನ್ ವತಿಯಿಂದ ಜರುಗಿದ ಗುರುವಂದನಾ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಆಲೆಟ್ಟಿ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ರೇವತಿ ಅವರಿಗೆ ಆಲೆಟ್ಟಿ ಪ್ರೌಢ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.


ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಗೋಪಾಲಕೃಷ್ಣ, ಹಿರಿಯರಾದ ದೇವಪ್ಪ ನಾಯ್ಕ್, ಬಾಪುಸಾಹೇಬ್ ಸೇರಿದಂತೆ ಶಾಲಾ ಹಿತೈಷಿಗಳು, ಶಾಲಾ ಸಹಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.