ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಶೌರ್ಯ ಜಾಗರಣ ರಥಯಾತ್ರೆಗೆ ಸಂಪಾಜೆಯಲ್ಲಿ ಸ್ವಾಗತ

0

ಮಾಜಿ ಸಚಿವ ಎಸ್. ಅಂಗಾರರಿಂದ ತೆಂಗಿನಕಾಯಿ ಒಡೆಯುವುದರ ಮೂಲಕ ರಥಯಾತ್ರೆಗೆ ಚಾಲನೆ

ವಿಶ್ವ ಹಿಂದೂ ಪರಿಷತ್ 60ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪ್ರಯುಕ್ತ ಬಜರಂಗದಳದ ನೇತೃತ್ವದಲ್ಲಿ ದೇಶಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದ್ದು, ಚಿತ್ರದುರ್ಗದಿಂದ ಹೊರಟಿದ್ದ ಶೌರ್ಯ ಜಾಗರಣ ರಥಯಾತ್ರೆಗೆ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡ ವತಿಯಿಂದ ಸಂಪಾಜೆಯಲ್ಲಿ ಸ್ವಾಗತ ಕೋರಲಾಯಿತು.

ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಮಾಜಿ ಸಚಿವ ಎಸ್. ಅಂಗಾರರು ತೆಂಗಿನಕಾಯಿ ಒಡೆಯುವುದರ ಮೂಲಕ ಶೌರ್ಯ ರಥಯಾತ್ರೆಗೆ ಸ್ವಾಗತ ಕೋರಿದರು. ಬಳಿಕ ಅಲ್ಲಿಂದ ಸಂಪಾಜೆ ಅರಣ್ಯ ತಪಾಸಣಾ ಚೆಕ್‌ ಪೋಸ್ಟ್ ತನಕ ಪಾದಯಾತ್ರೆಯ ಮೂಲಕ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ತೆರಳಿದರು.


ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಬಜರಂಗದಳದ ಸಂಚಾಲಕ ಹರಿಪ್ರಸಾದ್ ಎಲಿಮಲೆ, ಕಡಬ ತಾಲೂಕು ಬಜರಂಗದಳದ ಸಂಚಾಲಕ ರಾಜೇಶ್ ಉದನೆ, ಕಾರ್ಯದರ್ಶಿಗಳಾದ ನವೀನ್ ಎಲಿಮಲೆ, ಜಯಂತ ಕಲ್ಲುಗುಡ್ಡೆ, ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ, ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಅರಂತೋಡು ತೊಡಿಕಾನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಹಲವಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು. ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು ಅವರು ತಂಪು ಪಾನಿಯದ ವ್ಯವಸ್ಥೆ ಮಾಡಿ ಸಹಕರಿಸಿದರು.