ಬೆಳ್ಳಾರೆ ಪೊಲೀಸ್ ಠಾಣೆಯ ‘ತೆರೆದ ಮನೆ ‘ಕಾರ್ಯಕ್ರಮದಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು

0

ಬೆಳ್ಳಾರೆ ಪೊಲೀಸ್ ಠಾಣೆಯ ತೆರೆದ ಮನೆ ಕಾರ್ಯಕ್ರಮದಲ್ಲಿ ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ಆಂಗ್ಲ ಮತ್ತು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸಂತೋಷ್ ಪಿ ಬಿ ಅವರು ವಿದ್ಯಾರ್ಥಿಗಳಿಗೆ ಬಾಲಾಪರಾಧ, ರಿಮಂಡ್ ಹೋಂ ಕಳ್ಳ ಸಾಗಾಣಿಕೆ ಮಾದಕ ವಸ್ತುಗಳ ಬಳಕೆ ಮತ್ತು ದುಷ್ಪರಿಣಾಮಗಳು ಇಲಾಖೆಯ ನಿಯಮಗಳನ್ನು ಸವಿಸ್ತಾರವಾಗಿ ವಿವರಿಸಿದ್ದರಲ್ಲದೆ ಮಕ್ಕಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡಿ ಮಕ್ಕಳ ಸಂಶಯಗಳನ್ನು ಬಗೆಹರಿಸಿ ಮುಂದಿನ ದಿನಗಳಲ್ಲಿ ಮಕ್ಕಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿಗಳಾಗಿ ರೂಪು ಗೊಳ್ಳಬೇಕೆಂದು ತಿಳಿ ಹೇಳಿದರು. ಬೆಳ್ಳಾರೆ ಪೊಲೀಸ್ ಠಾಣೆಯ ಕ್ರೈಮ್ ಸಬ್ ಇನ್ಸ್ಪೆಕ್ಟರಾದ ಅಶೋಕ್ ಸಿ ಎಂ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳಲು ಇರುವ ತರಬೇತಿಗಳು, ಜಾಲತಾಣಗಳ ಬಗ್ಗೆ ಅರಿವು , ಪದೋನ್ನತಿಗಳ ಬಗ್ಗೆ ವಿವರಿಸಿದ್ದರು. ಪ್ರೊಫೆಷನರಿ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಸವಿತಾ ಪೋಕ್ಸೋ ಕಾಯ್ದೆ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದರು. ವಿದ್ಯಾರ್ಥಿಗಳು ನಾನಾ ರೀತಿಯ ಪ್ರಶ್ನೆಗಳನ್ನು ಕೇಳಿ ಸಮಸ್ಯೆಯನ್ನು ಬಗೆಹರಿಸಿಕೊಂಡರು.


ಕಾಣಿಯೂರಿನ ಬೀಟ್ ಪೊಲೀಸ್ ಚಂದ್ರಶೇಖರ ಗೌಡ ಸಹಕರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರಾದ ಅಶೋಕ್ ಕುಮಾರ್ ಪಿ ಮತ್ತು ವಿನಯ ವಿ. ಶೆಟ್ಟಿ ಉಪಸ್ಥಿತರಿದ್ದರು.