ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ , ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ, ಮಹಿಳಾ ಸಮಾಜ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ.30ರಂದು ತಾಲೂಕು ಪಂಚಾಯತ್ ಸಭಾಂಗಣ ಸುಳ್ಯ ಇಲ್ಲಿ ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿಯ ಅಧ್ಯಕ್ಷೆ ಶ್ರೀಮತಿ ಸುಷ್ಮಾ ದಿನೇಶ್ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪೋಷನ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ ಮಹಿಳೆಯರು ಸ್ಥಳೀಯವಾಗಿ ಸಿಗುವ ಆಹಾರ ಸಾಮಾಗ್ರಿಗಳಾದ ಹಸಿರು ಸೊಪ್ಪು ತರಕಾರಿ ಗಳನ್ನು ದಿನನಿತ್ಯದ ಅಡುಗೆಯಲ್ಲಿ ಬಳಸಿಕೊಂಡು ಸೇವಿಸುವುದರಿಂದ ತನ್ನ ಆರೋಗ್ಯದ ಜೊತೆ ಜೊತೆಗೆ ಇಡೀ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಂತಹ ಕಾರ್ಯಕ್ರಮ ಸಹಕಾರಿ ಎಂದರು.
ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಹಿಳೆಯರು ಅನೇಕ ಪೌಷ್ಟಿಕ ಆಹಾರ ಖಾದ್ಯಗಳನ್ನು ತಯಾರಿಸಿ ತಂದು ಪ್ರದರ್ಶನಕ್ಕೆ ಇಡಲಾಯಿತು. ಸುಳ್ಯದ ಪ್ರಸಿದ್ಧ ಪ್ರಸೂತಿ ತಜ್ಞರಾದ ಡಾ. ಗೀತಾ ದೊಪ್ಪರವರು ಸುರಕ್ಷಿತ ತಾಯ್ತನ, ಗರ್ಭಿಣಿ ತಾಯಿಯ ಆರೋಗ್ಯ, ಗರ್ಭ ಧರಿಸುವ ಮುನ್ನ ಕೈಗೊಳ್ಳಬೇಕಾದ ಆರೋಗ್ಯ ಪರೀಕ್ಷೆಗಳು, ಸಮತೋಲನ ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ವತಿಯಿಂದ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಇವರನ್ನು ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಧುಮತಿ ಬೊಳ್ಳೂರು, ತಾಲೂಕು ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಪುಷ್ಪ ರಾಧಾಕೃಷ್ಣ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಹರಿಣಿ ಸದಾಶಿವ ಮುಂತಾದವರು ವೇದಿಕೆಯಲ್ಲಿದ್ದರು. ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರಾದ ಶ್ರೀಮತಿ ಶೈಲಜಾ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸೆಪ್ಟೆಂಬರ್ ಮಾಹೆಯಲ್ಲಿ ನಡೆಯುವ ಪೋಷನ್ ಮಾಸಾ ಚರಣೆ ಕಾರ್ಯಕ್ರಮಗಳ ಬಗ್ಗೆ ಸವಿವರ ಮಾಹಿತಿ ನೀಡಿದರು. ಇಲಾಖೆಯ ಮೇಲ್ವಿಚಾರಕಿಯರಾದ ಶ್ರೀಮತಿ ವಿಜಯ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ರವಿಶ್ರೀ ಸ್ವಾಗತಿಸಿದರು. ಶ್ರೀಮತಿ ದೀಪಿಕಾ ರವರು ಮಹಿಳೆಯರು ತಯಾರಿಸಿದ ತಂದಿರುವ ಪೌಷ್ಟಿಕ ಆಹಾರ ಖಾದ್ಯ ಗಳಿಗೆ ಸ್ಪರ್ಧೆ, ಬಹುಮಾನ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಶ್ರೀಮತಿ ಉಷಾ ವಂದಿಸಿದರು. ಸ್ತ್ರೀಶಕ್ತಿ ಸದಸ್ಯೆ ಶ್ರೀಮತಿ ಪುಷ್ಪಾವತಿ ಪ್ರಾರ್ಥಿಸಿದರು.