ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗೆ ಸ್ವಾಗತ

0

ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2023ನೇ ನೂತನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗೆ ಸ್ವಾಗತ, ಸಮವಸ್ತ್ರ ವಿತರಣೆ ಮತ್ತು ಕೆ.ವಿ.ಜಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಅ. 5ರಂದು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು
ಅಡಿಟೋರಿಯಮ್‌ನಲ್ಲಿ ನಡೆಯಿತು.


ಅಕಾಡೆಮಿ ಆಫ್ ಲಿಬರಲ್
ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಸಮವಸ್ತ್ರ ವಿತರಿಸಿದರು. ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು
ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ವಿದ್ಯಾರ್ಥಿ ಕ್ಷೇಮಾಧಿಕಾರಿ ಗೈನೋಕಾಲಿಜಿಸ್ಟ್ ಡಾ. ಗೀತಾ ದೊಪ್ಪ, ಡಾ. ಪೂನಂ, ಡಾ. ಗೋಪಿನಾಥ್, ಲೇಡಿಸ್ ಹಾಸ್ಟೆಲ್‌ನ ಚೀಫ್ ವಾರ್ಡನ್
ಡಾ. ನವ್ಯ, ಬಾಯ್ಸ್ ಹಾಸ್ಟೆಲ್ ಚೀಫ್ ವಾರ್ಡನ್
ಡಾ. ದಿನೇಶ್, ಪ್ರೊ. ಶಿರಾಜ್ ಶಂಕರ್, ಅಸಿಸ್ಟೆಂಟ್ ಪ್ರೊಫೆಸರ್ ಡಾ. ದಾಮೋದರ, ಶ್ರುತಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ವಿ.ಎಸ್. ಪಾರೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೊಧಿಸಿದರು. ಈ ಸಂದರ್ಭದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಬೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.